ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ > ಮಾಧ್ಯಮಗಳಲ್ಲಿ > ಇತಿಹಾಸ ಅರಿಯದವ ಇತಿಹಾಸ ಸೃಷ್ಟಿಸಲಾರ

ಇತಿಹಾಸ ಅರಿಯದವ ಇತಿಹಾಸ ಸೃಷ್ಟಿಸಲಾರ

ಶಿಕಾರಿಪುರ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಭಾಷಾ ಸಂಘ ಹಾಗೂ ಗ್ರಂಥಾಲಯ ಸಲಹಾ ಸಮಿತಿ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ.ಎಸ್ ಪುಸ್ತಕ ಪ್ರದರ್ಶನವನ್ನು ಉದ್ಘಾಟನೆ ಮಾಡಿದರು. ಪುಸ್ತಕ ದಿನಾಚರಣೆಯ ಅಂಗವಾಗಿ ಪ್ರಾಧ್ಯಾಪಕರು ಪ್ರಶಿಕ್ಷಣಾರ್ಥಿಗಳು ಸಂಗ್ರಹಿಸಿದ ಪುಸ್ತಕಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.