ಬಾಲ ಕಾರ್ಮಿಕ ವಿರೋಧಿ ದಿನ : ಜನಜಾಗೃತಿ
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜುಗಳ ಐಕ್ಯೂಎಸಿ, ಸಮಾಜ ವಿಜ್ಞಾನ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಿಮ್ಮಲಾಪುರ ಮತ್ತು ದೂಪದಹಳ್ಳಿ ಗ್ರಾಮಗಳ ಬೀದಿಗಳಲ್ಲಿ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಬಾಲ ಕಾರ್ಮಿಕ ವಿರೋಧಿ ಘೋಷಣೆಗಳನ್ನು ಕೂಗುತ್ತ ಗ್ರಾಮಸ್ತರಲ್ಲಿ ಜಾಗೃತಿ ಮೂಡಿಸಿದರು. ಅದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ಸಂಘದ ಮಾರ್ಗದರ್ಶಕರಾದ ಡಾ. ದೇವರಾಜ ವೈ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ಪದ್ಧತಿ ಅನಾನುಕೂಲಗಳ ಕುರಿತು ಮಾಹಿತಿಯನ್ನು ನೀಡಿದರು. ಆ ಮೂಲಕ ಕಾಲೇಜಿನ ಬೋಧಕ ಸಿಬ್ಬಂದಿಗಳು ಹಾಗೂ ಪ್ರಸಿಕ್ಷಣಾರ್ಥಿಗಲೆಲ್ಲರೂ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗಿಳಿಸಿದರು.

(08187) 222383, 222067
kumadvathibed@gmail.com 

