ರಂಗಭೂಮಿಗೆ ಸಂಬಂದಿಸಿದಂತೆ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಐಕ್ಯೂಎಸಿ, ಭಾಷಾ ಸಂಘ ಹಾಗೂ ಸಿರಿಯಾಳ ಕಲಾಕೇಂದ್ರ ಶಿರಳಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಾಧ್ಯಾಪಕರು ಹಾಗೂ ಸಿರಿಯಾಳ ಕಲಾಕೇಂದ್ರದ ಕಾರ್ಯದರ್ಶಿಯಾದ ಡಾ. ಗುರುಪ್ರಸಾದ್ ಟಿ.ಆರ್ ಪ್ರಶಿಕ್ಷಣಾರ್ಥಿಗಳಿಗೆ ಬೋಧನೆಯಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ಉಪನ್ಯಾಸ ಹಾಗೂ ಅಭ್ಯಾಸಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಕುಮಾರ್ ಜಿ.ಎಸ್ ವಹಿಸಿದ್ದು, ಕಾಲೇಜಿನ ಎಲ್ಲ ಪ್ರಾಧ್ಯಾಪಕರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

(08187) 222383, 222067
kumadvathibed@gmail.com 

