Kumadvathi College of Education

Shikaripura
  (08187) 222383, 222067
  kumadvathibed@gmail.com

Media Watch

ಪ್ರಕಟಣೆ

Read More

ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ರೋಟರಿ ಕ್ಲಬ್, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ 50ಕ್ಕೂ ಹೆಚ್ಚು ಸಂಘ – ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ತಾಲ್ಲೂಕಿನ ಅನೇಕ ನಾಗರಿಕರು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು , ಸ್ವಯಂ ಸೇವಕರುಗಳು ರಕ್ತದಾನ ಮಾಡಿದ್ದಾರೆ. ಈ ಕಾರ್ಯಕ್ರಮ ಸಮಾಜಕ್ಕೆ ರಕ್ತದಾನದ ಮಹತ್ವ ಸಾರುವ ಮೂಲಕ ಮತ್ತಷ್ಟು ಜನರಿಗೆ ಪ್ರೇರಣೆ ನೀಡಿದೆ.

Read More

ರಂಗಭೂಮಿಗೆ ಸಂಬಂದಿಸಿದಂತೆ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಐಕ್ಯೂಎಸಿ, ಭಾಷಾ ಸಂಘ ಹಾಗೂ ಸಿರಿಯಾಳ ಕಲಾಕೇಂದ್ರ ಶಿರಳಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಾಧ್ಯಾಪಕರು ಹಾಗೂ ಸಿರಿಯಾಳ ಕಲಾಕೇಂದ್ರದ ಕಾರ್ಯದರ್ಶಿಯಾದ ಡಾ. ಗುರುಪ್ರಸಾದ್ ಟಿ.ಆರ್ ಪ್ರಶಿಕ್ಷಣಾರ್ಥಿಗಳಿಗೆ ಬೋಧನೆಯಲ್ಲಿ ರಂಗಭೂಮಿ ಆಧಾರಿತ ಅಂಶಗಳ ಕುರಿತು ಉಪನ್ಯಾಸ ಹಾಗೂ ಅಭ್ಯಾಸಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಕುಮಾರ್ ಜಿ.ಎಸ್ […]

Read More

ಅನುಪಯುಕ್ತ ವಸ್ತುವಿನಿಂದ ಕರಕುಶಲ ವಸ್ತು ತಯಾರಿಕೆ : ಕಸದಲ್ಲಿ ರಸ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ “ಕಸದಲ್ಲಿ ರಸ” ಎಂಬ ಶೀರ್ಷಿಕೆಗೆ ಪೂರಕವಾಗಿ ಅನುಪಯುಕ್ತ ವಸ್ತುಗಳಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಶಿಕ್ಷಣಾರ್ಥಿಗಳು ತಮ್ಮ ಮನೆಯಲ್ಲಿನ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಿ ಉತ್ತಮ ಕರಕುಶಲ ವಸ್ತುಗಳನ್ನು ತಯಾರಿಸಿ ತಮ್ಮ ಸೃಜನಾತ್ಮಕತೆಯನ್ನು ತೋರಿಸಿದರು. ಹಾಗೂ ತಾವು ತಯಾರಿಸಿದ ಕರಕುಶಲ ವಸ್ತುಗಳನ್ನು ಮತ್ತು ಉಪಯುಕ್ತ ವಸ್ತುಗಳನ್ನು ತೀರ್ಪುಗಾರರ ಮುಂದೆ ಸಾದರಪಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಯವರು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು […]

Read More

Yoga Day Programme – 22-06-2022

Read More

ಬಾಲ ಕಾರ್ಮಿಕ ವಿರೋಧಿ ದಿನ : ಜನಜಾಗೃತಿ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜುಗಳ ಐಕ್ಯೂಎಸಿ, ಸಮಾಜ ವಿಜ್ಞಾನ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಿಮ್ಮಲಾಪುರ ಮತ್ತು ದೂಪದಹಳ್ಳಿ ಗ್ರಾಮಗಳ ಬೀದಿಗಳಲ್ಲಿ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಬಾಲ ಕಾರ್ಮಿಕ ವಿರೋಧಿ ಘೋಷಣೆಗಳನ್ನು ಕೂಗುತ್ತ ಗ್ರಾಮಸ್ತರಲ್ಲಿ ಜಾಗೃತಿ ಮೂಡಿಸಿದರು. ಅದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ಸಂಘದ ಮಾರ್ಗದರ್ಶಕರಾದ ಡಾ. ದೇವರಾಜ ವೈ […]

Read More

Child Labor Day – 2022

Read More

ಬೀಜೋತ್ಸವ ಅಭಿಯಾನಕ್ಕೆ ಚಲನೆ

Read More

ಅರಣ್ಯದ ಉಳಿವಿಗಾಗಿ ಬಿಜೋತ್ಸವ

ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಶಿಕಾರಿಪುರ ವಲಯ ಅರಣ್ಯ ಉಪ ವಿಭಾಗದ ಸಂಯುಕ್ತ ಆಶ್ರಯದಲ್ಲಿ, ಅರಣ್ಯ ಇಲಾಖೆಯ ವಿನೂತನ ಕಾರ್ಯಕ್ರಮವಾದ ಬಿಜೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ ಬಿಜೋತ್ಸವ ಕಾರ್ಯಕ್ರಮದ ಆಶಯವನ್ನು ಮತ್ತು ಅರಣ್ಯ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ಈ ವೇಳೆ ಅರಣ್ಯ ಪ್ರದೇಶದಲ್ಲಿ ತಾರೆ ,ಹೊಂಗೆ, ಬಿದಿರು, ಕರಿಮತ್ತಿ , ಹೆಬ್ಬೇವು ಮರದ ಬೀಜಗಳನ್ನು ಬಿತ್ತಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ ಎಸ್ ವಹಿಸಿದ್ದು, ಸ್ವಾಮಿ ವಿವೇಕಾನಂದ […]

Read More

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾಲೇಜಿನ ಕ್ಯಾಂಪಸ್ ನಲ್ಲಿ ಸಸಿಗಳನ್ನು ನೆಡಲಾಯಿತು. ಹಾಗೆಯೇ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಶಿವಮೊಗ್ಗ ಡಿವಿಎಸ್ ಸೀನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಬಿ ಎಂ ಕುಮಾರಸ್ವಾಮಿಯವರು “ಧರೆ ಹತ್ತಿ ಉರಿದಡೆ” ಎಂಬ ಶೀರ್ಷಿಕೆ ಅಡಿಯಲ್ಲಿ ಪರಿಸರದ ಮಾಲಿನ್ಯ, ಪರಿಸರದ ಕಾಳಜಿಗಳು ಮತ್ತು ಪರಿಸರ ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಕರ್ತವ್ಯಗಳ ಕುರಿತು ಅಂಕಿ ಅಂಶಗಳ ಮೂಲಕ […]

Read More