Media Watch
ಬೆಂಕಿ ರಹಿತ ಖಾದ್ಯ ತಯಾರಿ ಸ್ಪರ್ಧೆ
Date : 16-05-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಬೆಂಕಿ ರಹಿತ ಖಾದ್ಯ ತಯಾರಿಕಾ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಕಾಲೇಜಿನ ವಿವಿಧ ತಂಡಗಳು ಭಾಗವಹಿಸಿದ್ದು, ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿ ಆ ಖಾದ್ಯ ಗಳ ಪ್ರಾಮುಖ್ಯತೆಯನ್ನು ತೀರ್ಪುಗಾರರಿಗೆ ವಿಶ್ಲೇಷಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ
Date : 12-05-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ತಂಡೋಪತಂಡವಾಗಿ ಅತ್ಯುತ್ತಮ ದೇಶಭಕ್ತಿಗೀತೆಗಳನ್ನು ಸುಮಧುರವಾಗಿ ಹಾಡುವುದರ ಮೂಲಕ ದೇಶಭಕ್ತಿಯನ್ನು ಮೆರೆದರು. ಕುಮದ್ವತಿ ಮಹಾವಿದ್ಯಾಲಯದಲ್ಲಿ ನಡೆದ ಗಾಯನ ಸ್ಪರ್ಧೆ ಹೇಗಿತ್ತು ನೋಡೋಣ ಬನ್ನಿ
ಇತಿಹಾಸ ಅರಿಯದವ ಇತಿಹಾಸ ಸೃಷ್ಟಿಸಲಾರ
Date : 26-04-2022
ಶಿಕಾರಿಪುರ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಭಾಷಾ ಸಂಘ ಹಾಗೂ ಗ್ರಂಥಾಲಯ ಸಲಹಾ ಸಮಿತಿ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ.ಎಸ್ ಪುಸ್ತಕ ಪ್ರದರ್ಶನವನ್ನು ಉದ್ಘಾಟನೆ ಮಾಡಿದರು. ಪುಸ್ತಕ ದಿನಾಚರಣೆಯ ಅಂಗವಾಗಿ ಪ್ರಾಧ್ಯಾಪಕರು ಪ್ರಶಿಕ್ಷಣಾರ್ಥಿಗಳು ಸಂಗ್ರಹಿಸಿದ ಪುಸ್ತಕಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ತಿಮ್ಲಾಪುರದಲ್ಲಿ ವಿಶ್ವಭೂಮಿ ದಿನಾಚರಣೆ
Date : 26-04-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಜಲಶಕ್ತಿ ಅಭಿಯಾನ ಕುರಿತು ತಿಮ್ಲಾಪುರ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನೀರಿನ ಸಂರಕ್ಷಣೆ ಕುರಿತು ಘೋಷಣೆಗಳನ್ನು ಕೂಗುತ್ತಾ ಗ್ರಾಮಸ್ಥರಲ್ಲಿ ಅರಿವನ್ನು ಮೂಡಿಸಲಾಯಿತು. ಈ ಸಂದರ್ಭದಲ್ಲಿ ನೀರು ಪೋಲಾಗುತ್ತಿರುವದನ್ನು ಗುರುತಿಸಿ ಅದನ್ನು ತಡೆಗಟ್ಟುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿಯನ್ನು ಕೂಡ ನೀಡಲಾಯಿತು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿಯಾದ ಕುಬೇರಪ್ಪ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಗಜಾನನ […]

(08187) 222383, 222067
kumadvathibed@gmail.com 







